Mangalore: ಮಂಗಳೂರು: ಆನ್‌ಲೈನ್ ಟ್ರೇಡಿಂಗ್ ನೆಪದಲ್ಲಿ 32 ಲ. ರೂ. ವಂಚನೆ

Share the Article

Mangalore: ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ಸಿಗುತ್ತೆ ಎಂದು ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಸೆ.9ರಂದು ಫೇಸ್‌ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. ಅದನ್ನು ಅಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದಾರೆ. ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿದ್ದಾಳೆ.ಇದರಿಂದ ಆಸಕ್ತಿಗೊಂಡು ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ ದೂರುದಾರಿಗೆ ಅನಂತರ ಕಾವ್ಯ ಶೆಟ್ಟಿ ತನ್ನ ವಾಟ್ಸಾಪ್ ನಂಬರ್‌ನಿಂದ ಲಿಂಕ್ ಕಳುಹಿಸಿ ಅದಕ್ಕೆ ಸೇರುವಂತೆ ತಿಳಿಸಿದ್ದಾಳೆ. ಲಿಂಕ್ ಒತ್ತಿದಾಗ ಟ್ರೇಡಿಂಗ್‌ ಆ್ಯಪ್ ತೆರೆದುಕೊಂಡಿದೆ. ಬಳಿಕ ಹೆಸರು, ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ.

ಬಳಿಕ ಟ್ರೇಡಿಂಗ್‌ನಲ್ಲಿ ಷೇರ್ ಖರೀದಿಸಲು 40,000 ರೂ. ಪಾವತಿ ಮಾಡಲು ತಿಳಿಸಿದಂತೆ ಸೆ.13ರಂದು ಪಾವತಿ ಮಾಡಿದ್ದು, ಲಾಭಾಂಶವಾಗಿ 9,504 ರೂ. ಹಣ ಖಾತೆಗೆ ಜಮೆಯಾಗಿದೆ. ಅನಂತರ 2,00,000 ರೂ. ಹಾಕಿದಾಗ ಅದಕ್ಕೆ ಲಾಭಾಂಶವಾಗಿ 23,760 ರೂ. ಜಮೆಯಾಗಿದೆ. ಹೀಗೆ ಹಂತ ಹಂತವಾಗಿ ಒಟ್ಟು 32,06,880 2. 2.138 .240 ಕಾವ್ಯ ಶೆಟ್ಟಿ ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿರುತ್ತಾರೆ. ಆದರೆ ಅನಂತರ ಯಾವುದೇ ಲಾಭಾಂಶ ಬರದೇ ಇದ್ದಾಗ ತಾವು ಮೋಸ ಹೋಗಿರುವ ಬಗ್ಗೆ ಅರಿವಾಗಿದೆ.

Comments are closed.