Airport: ಈ ದಿನ ಮುಂಬೈ ವಿಮಾನ ನಿಲ್ದಾಣ 6 ಗಂಟೆಗಳ ಕಾಲ ಬಂದ್: ಯಾಕೆ ಗೊತ್ತಾ?

Airport: ರನ್ ವೇ ನಿರ್ವಹಣಾ ಕಾರ್ಯವನ್ನು ಕೈಗೊತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನ. 20 ರಂದು 6 ಗಂಟೆಗಳ ಕಾಲ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ನಿರಂತರ ಸುರಕ್ಷತೆ, ವಿಶ್ವಾಸಾರ್ಹತೆ, ಜಾಗತಿಕ ವಾಯುಯಾನ ಮಾನದಂಡಗಳ ಅನುಸರಣೆಗಳನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಅದಾನಿ ಗ್ರೂಪ್ -AAI ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ನ. 20 ರಂದು ಬೆಳಗ್ಗೆ 11 ಗಂಟೆಯಿಂದ 5 ರ ವರೆಗೆ ಎರಡೂ ರನ್ ವೇ ಗಳು ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವುದಿಲ್ಲ ಎಂದು ವಿಮಾನ ನಿಲ್ದಾಣ ಮಾಹಿತಿ ನೀಡಿದೆ.
Comments are closed.