Shiradi Ghat: ಶಿರಾಡಿ ಘಾಟ್‌ನಲ್ಲಿ ರೈಲು-ರೋಡ್‌ ಸುರಂಗ ಮಾರ್ಗದ ಸಮೀಕ್ಷೆಗೆ ಕೇಂದ್ರ ಹೆದ್ದಾರಿ ಸಚಿವಾಲಯದಿಂದ ಸಮಿತಿ ರಚನೆ

Share the Article

Shiradi Ghat: ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಂಬಂಧಪಟ್ಟಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ಮಾಡಲಾಗುವುದು. ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಿದೆ.

ಸಂಸದ ಬ್ರಿಜೇಶ್‌ ಚೌಟ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಜಂಟಿ ಸಮೀಕ್ಷೆಗೆ ಸಮಿತಿ ರಚನೆ ಮಾಡಲು ಕೋರಿ ಪತ್ರವನ್ನು ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು ಸಮಿತಿ ರಚಿಸಿರುವುದಾಗಿ ತಿಳಿಸಿದ್ದಾರೆ.

ಇದು ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಯೋಜನೆಯ ಬಗೆಗಿನ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಹುದಿನದ ಕನಸು ನನಸಾಗುವ ಮೊದಲ ಹೆಜ್ಜೆಯಾಗಿದೆ. ಶಿರಾಡಿ ಘಾಟ್ ಪ್ರದೇಶದ ಪರಿಸರ ಸೂಕ್ಷ್ಮತೆ ಮತ್ತು ಭೌಗೋಳಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು ಈ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ರೈಲ್ವೇ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆ ಕೈಗೊಳ್ಳಲು ಮತ್ತು ಡಿಪಿಆರ್ ಮೇಲ್ವೀಚಾರಣೆಗೆ ತಜ್ಞರ ಸಮಿತಿ ನೇಮಿಸುವಂತೆ ಮನವಿ ಮಾಡಲಾಗಿತ್ತು. ನಮ್ಮ ಮನವಿಗೆ ತಕ್ಷಣ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ಬ್ರಿಜೇಜ್‌ ಚೌಟ ಹೇಳಿದ್ದಾರೆ.

Comments are closed.