ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿ ಯಾಕಾಗಿಲ್ಲ? RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

RSS: ಆರ್ಎಸ್ಎಸ್ ಚಟುವಟಿಕೆಗಳಿಗೆ ರಾಜ್ಯ ಸರಕಾರ ನಿರ್ಬಂಧ ವಿಚಾರ ತೀವ್ರ ವಿವಾದ ಸ್ವರೂಪ ಪಡೆದಿದ್ದು, ಇದರ ನಡುವೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿ ಆಗಿಲ್ಲ. ಇವರಿಗೆ ಪ್ರತ್ಯೇಕ ಕಾನೂನು ದೇಶದಲ್ಲಿ ಇದೆಯಾ ಎನ್ನುವ ಪ್ರಶ್ನೆಗಳು ಕಾಂಗ್ರೆಸ್ ಪಾಳಯದಿಂದ ಕೇಳಿಬಂದಿದೆ. ಇಂತಹ ಆರೋಪಕ್ಕೆ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಉತ್ತರ ನೀಡಿದ್ದಾರೆ.

ಇಂದು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳ ರಾಜ್ಯದಿಂದ ಆಗಮಿಸಿರುವ ವಿವಿಧ ಕ್ಷೇತ್ರಗಳ ಆಹ್ವಾನಿತರ ಪ್ರಶ್ನೆಗೆ ಅವರು ಉತ್ತರ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. RSS ಸ್ಥಾಪನೆ ಆಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟಿಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ಡಾಯ ಮಾಡಿಲ್ಲ. ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕ ಸಂಘವಾಗಿದ್ದು,ಹೀಗಾಗಿಯೇ ನೋಂದಣಿ ಮಾಡಿಸಿಲ್ಲ. ಹಿಂದೂ ಧರ್ಮ ಕೂಡಾ ನೋಂದಣಿ ಆಗಿಲ್ಲ. ಆರ್ಎಸ್ಎಸ್ ನಿಷೇಧ ಮಾಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಕೋರ್ಟ್ ಇದನ್ನು ತಿರಸ್ಕರಿಸಿದೆ. ನಮ್ಮದು ಸಂವಿಧಾನಾತ್ಮಕ ಸಂಘವಾಗಿದ್ದು, ಆರ್ಎಸ್ಎಸ್ ಆದಾಯ ತೆರಿಗೆ ಸಹ ಕಟ್ಟುತ್ತಿದೆ ಎಂದು ಹೇಳಿದ್ದಾರೆ.
Comments are closed.