Karnataka: ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರದಿಂದ ಬ್ರೇಕ್

Karnataka: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಎತ್ತಿನಹೊಳೆ ಏತ ನೀರಾವರಿ ಯೋಜನೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆ ಹಿಡಿದಿದೆ.ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 2,000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗಾಗಿ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರವು ತಡೆಹಿಡಿದು ಆದೇಶ ಹೊರಡಿಸಿದೆ. ಯೋಜನೆಯ ಸದಸ್ಯರು ಗಂಭೀರ ಪರಿಸರ ಕಾಳಜಿಗಳನ್ನು ಮತ್ತು ಅರಣ್ಯ ಕಾನೂನುಗಳ ಉಲ್ಲಂಘನೆಯ ವಿರುದ್ಧ ನಿರಂತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Comments are closed.