Kodagu: ಕೊಡಗು: ನವಜಾತ ಶಿಶುವಿನ ಮೃತದೇಹ ಪತ್ತೆ

Kodagu: ಮಡಿಕೇರಿ ಅರಣ್ಯ ಭವನ ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಆಗಿದೆ. 15 ದಿನಗಳ ಹಿಂದೆ ಮಗುಜನಿಸಿದ್ದು, 3 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ವೃತ್ತ ನಿರೀಕ್ಷಕರಾದ ಪಿ.ಕೆ. ರಾಜು, ಠಾಣಾಧಿಕಾರಿ ಅನ್ನಪೂರ್ಣ, ಕ್ರೈಂ ಸಿಬ್ಬಂದಿಗಳು, ಶಿಶು ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
Comments are closed.