Mangalore: ಮಂಗಳೂರು: ಮಾಲ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ನಾಪತ್ತೆ

Share the Article

Mangalore: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಮಹಿಳೆ ಒಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾ‌ರ್ ಅವರ ಪತ್ನಿ ಸುಮಾ ಎನ್‌.(24) ಎಂದು ಗುರುತಿಸಲಾಗಿದೆ.ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾ‌ರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ನಂತರ ಸಂಬಂಧಿಕರು ಮತ್ತು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಕುಮಾರ್ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.ಸುಮಾ ಅವರು ಸುಮಾರು 5 ಅಡಿ ಎತ್ತರ, ಮಧ್ಯಮ ಮೈಕಟ್ಟು ಮತ್ತು ಗೋಧಿ ಬಣ್ಣದ ಮೈಕಟ್ಟು ಹೊಂದಿದ್ದಾರೆ. ಅವರು ಕೊನೆಯದಾಗಿ ಕಪ್ಪು ಪ್ಯಾಂಟ್ ಮತ್ತು ಕಪ್ಪು ಉದ್ದ ತೋಳಿನ ಶರ್ಟ್‌ ಧರಿಸಿದ್ದರು. ಅವರು ಕನ್ನಡ, ತುಳು ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.

Comments are closed.