Bihar Election : ಬಿಹಾರದಲ್ಲಿ NDA ಗೆ ಭರ್ಜರಿ ಗೆಲುವು- ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಯಾರು?

Bihar Election : ಬಿಹಾರ ವಿಧಾನ ಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತ ತಲುಪಿದ್ದು ಬರೋಬ್ಬರಿ ಇನ್ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದೆ. ಹಾಗಿದ್ದರೆ ಬಿಹಾರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರು ಯಾರು?

ಸಾಧಾರಣವಾಗಿ ಚುನಾವಣೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ನೆಕ್ ಟು ನೆಕ್ ಫೈಟ್ ಇರುತ್ತದೆ. ಆದರೆ ಬಿಹಾರದಲ್ಲಿ (Bihar Election) ಈಗ ಆಡಳಿತರೂಢ ಜೆಡಿಯು (JDU) ಮತ್ತು ಬಿಜೆಪಿ (BJP) ಮಧ್ಯೆ ತೀವ್ರವಾದ ಪೈಪೋಟಿ ನಡೆಯುತ್ತಿದೆ.
ಬಿಜೆಪಿ ಮತ್ತು ಜೆಡಿಯು 101 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಬಿಜೆಪಿ 84, ಜೆಡಿಯು 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿವೆ. ಆದರೆ ಕೆಲ ಕ್ಷೇತ್ರಗಳಲ್ಲಿ ಜೆಡಿಯು ಅಲ್ಪ ಮತಗಳಿಂದ ಹಿನ್ನಡೆಯಲ್ಲಿದೆ. ಆರ್ಜೆಡಿ 34, ಕಾಂಗ್ರೆಸ್ 5, ಇತರರು 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಎನ್ಡಿಎ 190 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಮಹಾಘಟಬಂಧನ್ 49 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿವೆ.
Comments are closed.