ಮೂಗಿಗೆ ನೀರು ತಾಗಿಸಬೇಡಿ; ಶಬರಿಮಲೆ ಯಾತ್ರಿಕರಿಗೆ ಆರೋಗ್ಯ ಮಾರ್ಗಸೂಚಿ ಬಿಡುಗಡೆ

Share the Article

ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ.

ಯಾತ್ರೆಗೆ ಬರುವ ಸಂದರ್ಭದಲ್ಲಿ ಅಗತ್ಯ ಔಷಧ ತರಬೇಕು, ಯಾತ್ರೆ ಪ್ರಾರಂಭ ಮಾಡುವ ಮೊದಲು ವಾಕಿಂಗ್‌ ಅಭ್ಯಾಸ ಮಾಡಿಕೊಳ್ಳಿ. ಬೆಟ್ಟ ಹತ್ತುವಾಗ ಯಾವುದೇ ಧಾವಂತ ಮಾಡದೆ ನಿಧಾನವಾಗಿ ಹತ್ತಲು ಹೇಳಲಾಗಿದೆ.

ಆರೋಗ್ಯ ಸಹಾಯ ಬೇಕಿದ್ದಲ್ಲಿ ಅಲ್ಲಿನ ಸಿಬ್ಬಂದಿಯನ್ನು ಕೂಡಲೇ ಸಂಪರ್ಕಿಸಿ, ಒಂದು ವೇಳೆ ಹಾವು ಕಡಿದಲ್ಲಿ ತಕ್ಷಣವೇ ಸಿಬ್ಬಂದಿ ಗಮನಕ್ಕೆ ತಂದು ಚಿಕಿತ್ಸೆ ಪಡೆದುಕೊಳ್ಳಿ ಎಂದು ಸೂಚಿಸಿದೆ. ಯಾತ್ರಿಕರು ಬಯಲು ಬಹಿರ್ದೆಸೆಯನ್ನು ನಿಷೇಧಿಸಲಾಗಿದೆ. ಜೊತೆಗೆ ನಿಗದಿತ ಸ್ಥಳಗಳಲ್ಲಿಯೇ ಶೌಚಕರ್ಮ ಮುಗಿಸಿ, ಅಗತ್ಯ ಸಾಬೂನಿನಿಂದ ಕೈತೊಳೆದುಕೊಳ್ಳಬೇಕೆಂದಿದೆ. ಇದೇ ವೇಳೆ ಯಾತ್ರಿಕರು ಕೇವಲ ಬಿಸಿ ನೀರನ್ನು ಕುಡಿಯಬೇಕಾಗಿ ಹೇಳಿದೆ. ತುರ್ತು ಪರಿಸ್ಥಿತಿಗೆ 04735 203232 ಸಂಖ್ಯೆಗೆ ಕರೆ ಮಾಡಬಹುದೆಂದು ತಿಳಿಸಿದೆ.

Comments are closed.