ಮಹೇಶ್‌ ಶೆಟ್ಟಿ ತಿಮರೋಡಿ ಗೆ ಬಿಗ್‌ ರಿಲೀಫ್‌: ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್‌ !

Share the Article

ಧರ್ಮಸ್ಥಳ ಗ್ರಾಮದಲ್ಲಿ ಸಂಚಲನ ಸೃಷ್ಟಿ ಉಂಟು ಮಾಡಿದ ಬುರುಡೆ ಪ್ರಕರಣ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರಿಗೆ ನೀಡಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್‌ ರದ್ದು ಮಾಡಿದೆ.

ನ್ಯಾ.ಸೂರಜ್‌ ಗೋವಿಂದ್‌ ಅವರಿದ್ದ ಪೀಠ ಆದೇಶ ಹೊರಡಿಸಿದೆ. ವಿಚಾರಣೆ ಹೊಸದಾಗಿ ನಡೆಸಿ, ಸೂಕ್ತ ಕಾರಣ ನೀಡಿ, ಸೆಕ್ಷನ್‌ಗಳೊಂದಿಗೆ ಆದೇಶ ಹೊರಡಿಸಲು ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಗಡಿಪಾರು ಅಗತ್ಯವಿದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್‌ ಅವಕಾಶ ನೀಡಿದೆ.

ಸ್ಥಳೀಯ ಆಡಳಿತ ಗಡಿಪಾರು ಆದೇಶವನ್ನು ಪ್ರಶ್ನೆ ಮಾಡಿ ಹೈಕೋರ್ಟಿಗೆ ಮಹೇಶ್‌ ಶೆಟ್ಟಿ ಅರ್ಜಿ ಸಲ್ಲಿಕೆ ಮಾಡಿದ್ದು, ಗಡಿಪಾರು ಆದೇಶವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದರು. ಇದೀಗ ಕೋರ್ಟ್‌ ಗಡಿಪಾರು ಆದೇಶ ರದ್ದು ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶ ಮಾಡಿದೆ.

Comments are closed.