IPL -2026 : 10 ತಂಡಗಳಿಗೆ ಕೋಚ್ ಫೈನಲ್!!

IPL-2026 : ಐಪಿಎಲ್ 2026ಕ್ಕೆ ಎಲ್ಲಾ 10 ಪ್ರಾಂಚೈಸಿಗಳು ಸಕಲ ಸಿದ್ಧತೆ ನಡೆಸಿದ್ದು, ಈ ಬೆನ್ನಲ್ಲೇ ಇದೀಗ ಐಪಿಎಲ್ ಹರಾಜಿಗೆ ಬಿಸಿಸಿಐ ಮುಹೂರ್ತ ಫಿಕ್ಸ್ ಮಾಡಿದೆ. ಇದರ ಬೆನ್ನಲ್ಲೇ ಹತ್ತು ತಂಡಗಳಿಗೂ ಕೂಡ ಕೋಚ್ ಫೈನಲ್ ಆಗಿದೆ. ಹಾಗಿದ್ದರೆ ಯಾವ ತಂಡಕ್ಕೆ ಯಾರು ಕೋಚ್ ಎಂಬುದನ್ನು ನೋಡೋಣ.

RCB: ಹಾಲಿ ಚಾಂಪಿಯನ್ ಆರ್ಸಿಬಿ ತಂಡದ ಮುಖ್ಯ ಕೋಚ್ ಆಗಿ ಝಿಂಬಾಬ್ವೆ ತಂಡದ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಮುಂದುವರೆಯಲಿದ್ದಾರೆ.
ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನೇ ಮುಂದುವರೆಸಲು ಪಂಜಾಬ್ ಕಿಂಗ್ಸ್ ನಿರ್ಧರಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್: ಟೀಮ್ ಇಂಡಿಯಾದ ಮಾಜಿ ಆಟಗಾರ ಹೆಮಾಂಗ್ ಬದಾನಿ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ನೇಮಕವಾಗಿದ್ದರು. ಈ ಬಾರಿ ಕೂಡ ಬದಾನಿ ಅವರೇ ಕೋಚ್ ಆಗಿ ಮುಂದುವರೆಯಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡದ ಕೋಚ್ ಸ್ಥಾನದಿಂದ ಚಂದ್ರಕಾಂತ್ ಪಂಡಿತ್ ನಿರ್ಗಮಿಸಿದ್ದು, ಅವರ ಸ್ಥಾನಕ್ಕೆ ಅಭಿಷೇಕ್ ನಾಯರ್ ನೇಮಕವಾಗಿದ್ದಾರೆ

ರಾಜಸ್ಥಾನ್ ರಾಯಲ್ಸ್: ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ್ ಸಂಗಾಕ್ಕರ ಈ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್: ಲಕ್ನೋ ತಂಡದ ಹೊಸ ಕೋಚ್ ಆಗಿ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ.
ಗುಜರಾತ್ ಟೈಟಾನ್ಸ್: ಗುಜರಾತ್ ಟೈಟಾನ್ಸ್ ತಂಡ ತಮ್ಮ ಕೋಚ್ ಅನ್ನು ಬದಲಿಸಿಲ್ಲ. ಟೀಮ್ ಇಂಡಿಯಾದ ಮಾಜಿ ಆಟಗಾರ ಆಶಿಶ್ ನೆಹ್ರಾ ಮುಖ್ಯ ಕೋಚ್ ಆಗಿ ಈ ಬಾರಿ ಕೂಡ ಮುಂದುವರೆದಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್: ಎಸ್ಆರ್ಹೆಚ್ ತಂಡದ ಕೋಚ್ ಆಗಿ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಆಯ್ಕೆಯಾಗಿದ್ದಾರೆ
ಚೆನ್ನೈ ಸೂಪರ್ ಕಿಂಗ್ಸ್: ಸಿಎಸ್ಕೆ ತಂಡದ ತರಬೇತಿಯ ಉಸ್ತುವಾರಿ ಈ ಬಾರಿ ಕೂಡ ನ್ಯೂಝಿಲೆಂಡ್ ತಂಡದ ಮಾಜಿ ಆಟಗಾರ ಸ್ಟೀಫನ್ ಫ್ಲೇಮಿಂಗ್ ಕೈಯಲ್ಲಿದೆ. ಕಳೆದ ಕೆಲ ವರ್ಷಗಳಿಂದ ಅವರೇ ಈ ತಂಡಕ್ಕೆ ಕೋಚ್ ಆಗಿ ಮುಂದುವರೆದಿದ್ದಾರೆ.
ಮುಂಬೈ ಇಂಡಿಯನ್ಸ್: ಶ್ರೀಲಂಕಾದ ಮಾಜಿ ಆಟಗಾರ ಮಹೇಂದ್ರ ಜಯವರ್ಧನೆ ಕಳೆದ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದರು. ಈ ಬಾರಿಯೂ ಮಹೇಂದ್ರ ಜಯವರ್ಧನೆ ಅವರೇ ತಂಡದ ತರಬೇತುಗಾರರಾಗಿ ಮುಂದುವರೆಯಲಿದ್ದಾರೆ.
Comments are closed.