Rice Price : ಅಕ್ಕಿ ಬೆಲೆ ಸದ್ಯದಲ್ಲೇ 10 ರೂ ಹೆಚ್ಚಳ!?

Rice Price : ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗೆಟ್ಟಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು ಸದ್ಯದಲ್ಲೇ ಅಕ್ಕಿ ಬೆಲೆ ಕೂಡ ರೂ.10 ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು, ಎಲ್ಲ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ದುಬಾರಿ ಜೀವನ ನಡೆಸುವುದು ಕಷ್ಟ ಎಂದು ಜನಸಾಮಾನ್ಯರು ಒದ್ದಾಡುತ್ತಿದ್ದಾರೆ. ಈಗ ರಾಜ್ಯದಲ್ಲಿ ಅಕ್ಕಿ ಬೆಲೆ ದಿಢೀರ್ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ ಅಕ್ಕಿ ಪ್ರತಿ ಕೆ.ಜಿ.ಗೆ 10 ರೂಪಾಯಿವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತಾಗಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾಹಿತಿ ಹಂಚಿಕೊಂಡು ಕಿಡಿಕಾರಿದ್ದಾರೆ.
ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಈ ಬಾರಿ ಎರಡನೇ ಬೆಳೆಗೆ ನೀರು ಹರಿಸದೆ ಇರುವ ಕಾರಣದಿಂದ 20 ಲಕ್ಷ ಟನ್ ಅಕ್ಕಿ ಉತ್ಪಾದನೆ ಖೋತಾ ಆಗಲಿದೆ. ಇದರಿಂದ ಅಕ್ಕಿ ಗಿರಣಿ ಉದ್ಯಮವು ನೆಲಕಚ್ಚಲಿದೆ. ಅಲ್ಲದೆ, ರೈತರಿಗೂ ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಯತ್ನಾಳ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಕಳವಳ ವ್ಯಕ್ತಪಡಿಸಿದ್ದಾರೆ.
Comments are closed.