ಉಗ್ರ ಸಂಘಟನೆ ಸೇರಲು ಹೆತ್ತಮ್ಮ ತಂದೆ ಒತ್ತಾಯ: ಪೊಲೀಸರಿಗೆ ಕರೆ ಮಾಡಿದ ಮಗ

ತಿರುವನಂತಪುರಂ: ಹೆತ್ತ ತಾಯಿ ಮತ್ತು ಮಲತಂದೆ ತಮ್ಮ 16 ವರ್ಷದ ಮಗನಿಗೆ ಉಗ್ರ ಸಂಘಟನೆಗೆ ಸೇರುವಂತೆ ಒತ್ತಡ ಹಾಕುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

16 ವರ್ಷದ ಬಾಲಕ ಪೊಲೀಸರಿಗೆ ಕರೆ ಮಾಡಿ ಈ ವಿಚಾರವನ್ನು ತಿಳಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ತಾಯಿ ಮತ್ತು ಮಲತಂದೆ ಮೂಲಭೂತವಾದಿ ಚಟುವಟಿಕೆಗಳ ವಿಡಿಯೋಗಳನ್ನು ತೋರಿಸುವ ಮೂಲಕ ನನ್ನನ್ನು ಭಯೋತ್ಪಾದಕ ಸಂಘಟನೆಗೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಾಲಕ ಆರೋಪಿಸಿದ್ದಾನೆ.
ಬಾಲಕನ ಕುಟುಂಬವು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವಾಸಿಸುತ್ತಿದ್ದಾಗ ಆತನಿಗೆ ಮೂಲಭೂತವಾದದ ಬಗ್ಗೆ ತಿಳಿಸಲಾಗಿದೆ. ಬಾಲಕ ತನ್ನ ದೂರಿನಲ್ಲಿ ಮಾಡಿರುವ ಆರೋಪಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.