ಮಿದುಳು ತಿನ್ನುವ ಅಮೀಬಾ: ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ

Share the Article

ಮಂಗಳೂರು: ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾದಿಂದ ಬರುವ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆಗೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

ನೇಗೇರಿಯಾ ಫೌಲೇರಿ ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.
ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವ್ರ ತಲೆನೋವು, ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ ಕಂಡುಬರುತ್ತವೆ. ಅಲ್ಲದೆ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ‘ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Comments are closed.