Nitish Kumar: 10ನೇ ಬಾರಿಗೆ ಬಿಹಾರ ಸಿಎಂ ಆಗಿ ಇಂದು ನಿತೀಶ್ ಕುಮಾರ್ ಪ್ರಮಾಣವಚನ

Share the Article

Nitish Kumar: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಸತತ 10ನೇ ಬಾರಿಗೆ ಬಿಹಾರ ಸಿಎಂ (Bihar CM) ಆಗಿ ಇಂದು ಪ್ರಮಾಣವಚನ (Oath) ಸ್ವೀಕರಿಸಲಿದ್ದಾರೆ.

ಪಾಟ್ನಾದ (Patna) ಗಾಂಧಿ ಮೈದಾನದಲ್ಲಿ (Gandhi Maidan) ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಉನ್ನತ ಎನ್‌ಡಿಎ (NDA) ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಮುಖ್ಯ ವೇದಿಕೆಯ ಹೊರತಾಗಿ, ವಿಐಪಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಹಲವಾರು ಪೆಂಡಾಲ್‌ಗಳನ್ನು ಸಹ ನಿರ್ಮಿಸಲಾಗಿದೆ. ಹೆಚ್ಚುವರಿ ಭದ್ರತಾ ವ್ಯವಸ್ಥೆಗಳನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ನಿತೀಶ್ ಜೊತೆಗೆ ಸುಮಾರು 20-22 ಜನ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕರಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಆಯ್ಕೆ ಮಾಡಿದ್ದು, ಈ ಇಬ್ಬರು ನಿತೀಶ್ ಕುಮಾರ್ ನೇತೃತ್ವದ ನೂತನ ಎನ್‌ಡಿಎ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Comments are closed.