Heart Attack: ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಸಾವು

Share the Article

Heart Attack: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು.

ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈಶ್ವರ ಗೌಡ ಅವರು ತಮ್ಮ ಪಾತ್ರ ಮುಗಿಸಿ ಇಹಲೋಕ ತ್ಯಜಿಸಿದ್ದಾರೆ.

ಮೇಳದಲ್ಲಿ ತಂದೆ ಕೂಡ ವೇಷಧಾರಿಯಾಗಿದ್ದರು. ಈಶ್ವರ ಗೌಡ ಅವರು ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಪಾತ್ರ ನಿರ್ವಹಿಸಿದ್ದರು.

Comments are closed.