BBK-12 : ಕಿಚ್ಚ ಸುದೀಪ್, ಅಶ್ವಿನಿ ಗೌಡ ಹಾಗೂ ರಿಷಾ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!!

Share the Article

BBK-12 : ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರಹಚಾರ ಯಾಕೋ ನೆಟ್ಟಗಿಲ್ಲದಂತೆ ಕಾಣುತ್ತಿದೆ. ಯಾಕೆಂದರೆ ಒಬ್ಬ ಸ್ಪರ್ಧಿಯಾದ ಮೇಲೆ ಒಬ್ಬ ಸ್ಪರ್ಧಿ ಎಂಬಂತೆ ದೂರುಗಳು ದಾಖಲಾಗುತ್ತಿವೆ. ಇತ್ತೀಚಿಗಷ್ಟೇ ಗಿಲ್ಲಿ ನಟ, ರಿಷಾ ವಿರುದ್ಧ ದೂರು ದಾಖಲಿಸುವ ಪ್ರಯತ್ನ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಬಿಗ್ ಬಾಸ್ ನಿರೂಪಕರಾದ ಕಿಚ್ಚ ಸುದೀಪ್, ಸ್ಪರ್ಧೆಗಳಾದ ಅಶ್ವಿನಿ ಗೌಡ, ಹಾಗೂ ರಿಷಾ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಿಸಲಾಗಿದೆ.

ಹೌದು, ಸಮಾಜಿಕ ಹೋರಾಟಗಾರ್ತಿ ಸಂಧ್ಯಾ ಪವಿತ್ರ ಅವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ದೂರಿನಲ್ಲಿ ನಿರೂಪಕ ಕಿಚ್ಚ ಸುದೀಪ್, ಸ್ಪರ್ಧಿಗಳಾದ ಅಶ್ವಿನಿ ಗೌಡ ಮತ್ತು ರಿಷಾ ಗೌಡ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಡ ಹೇಳಲಾಗಿದೆ. ರಿಷಾ ಗೌಡ ಗಿಲ್ಲಿ ಮೇಲೆ ಹಲ್ಲೆ ಮಾಡಿದ್ದರು ಜೊತೆಗೆ ಅಶ್ವಿನಿ ಗೌಡ ಜಾತಿ ನಿಂದನೆ ಮಾಡಿದ್ದರು ಎಂಬ ಆರೋಪದ ಮೇಲೆ ಈ ದೂರು ನೀಡಲಾಗಿದೆ. ಸ್ಪರ್ಧಿ ಅಶ್ವಿನಿ ಗೌಡ ಮತ್ತು ರಿಷಾ ಗೌಡ, ರಕ್ಷಿತಾ ಶೆಟ್ಟಿ ಅವರ ಬಗ್ಗೆ ಜಾತಿಯಾಧಾರಿತ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಅಲ್ಲದೆ ಇದು ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದು, ಶೋ ಇಂತಹ ವಿಷಯಗಳನ್ನು ಪ್ರೋತ್ಸಾಹಿಸುವುದು ತಪ್ಪು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂಧ್ಯಾ ಪವಿತ್ರ ದೂರು ಸಲ್ಲಿಸುವ ಸಂದರ್ಭದಲ್ಲಿ ಕೆಲವು ಸಾಮಾಜಿಕ ಸಂಘಟನೆಗಳ ಮುಖಂಡರು ಸಹ ಭಾಗವಹಿಸಿದ್ದರು.

Comments are closed.