Prahalad Joshi: ಡಿಕೆಶಿ ಬಿಜೆಪಿ ಸೇರಿ ಸಿಎಂ, ವಿಜಯೇಂದ್ರ ಡಿಸಿಎಂ? ಪ್ರಹ್ಲಾದ್ ಜೋಶಿ ಅಚ್ಚರಿ ಹೇಳಿಕೆ

Share the Article

Prahalad Joshi: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಬಣಗಳ ನಡುವೆ ವೈ ಮನಸ್ಸು ಉಂಟಾಗುತ್ತಿದೆ. ಇದಲ್ಲದರ ನಡುವೆ ಕೇಳಿ ಬರುತ್ತಿರುವ ವಿಚಾರವೆಂದರೆ ಡಿಕೆ ಶಿವಕುಮಾರ್ ಅವರು ಸುಮಾರು 50ಶಾಸಕರೊಂದಿಗೆ ಬಿಜೆಪಿ ಸೇರುತ್ತಾರೆ ಎಂಬ ವಿಚಾರ!!

ಹೌದು ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ತನ್ನ ಬೆಂಬಲಿಗರಾದ ಐವತ್ತು ಶಾಸಕರನ್ನು ಒಟ್ಟುಗೂಡಿಸಿಕೊಂಡು ಡಿಕೆ ಶಿವಕುಮಾರ್ ಅವರು ಬಿಜೆಪಿ ಸೇರಿ ಸಿಎಂ ಆಗುತ್ತಾರೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರಿಗೆ ಡಿಸಿಎಂ ಪಟ್ಟ ಧಕ್ಕಲಿದೆ ಎಂಬ ವದಂತಿಗಳು ಕೂಡ ಹಬ್ಬಿವೆ. ಇದೀಗ ಈ ವಿಚಾರದ ಕುರಿತು ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ ಜೋಶಿ ಅವರು ಹೇಳಿಕೆಯನ್ನು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದರೆ, ಬಿವೈ ವಿಜಯೇಂದ್ರ ಉಪಮುಖ್ಯಮಂತ್ರಿ ಆಗುತ್ತಾರೆ ಎಂಬ ವದಂತಿಗಳನ್ನು ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಯೋಚನೆ ನಮ್ಮ ಪಕ್ಷದ್ದಲ್ಲ ಎಂದರು. ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಯಾವುದೇ ಕಾರಣಕ್ಕೂ ಈ ಸರ್ಕಾರದ ಅಸ್ಥಿರತೆಯನ್ನು ನಾವು ಬಯಸುವುದಿಲ್ಲ. ಈ ಸರ್ಕಾರ ಐದು ವರ್ಷಗಳ ಕಾಲ ತಮ್ಮ ಅವಧಿಯನ್ನು ಮುಗಿಸಬೇಕು, ಇದು ನಮ್ಮ ಆಶಯ ಎಂದು ಜೋಶಿ ಹೇಳಿದ್ದಾರೆ.

Comments are closed.