Arun Kumar Puttila : ಬಿಜೆಪಿ ವಿರುದ್ಧ ಮತ್ತೆ ಮುನಿಸಿಕೊಂಡ ಅರುಣ್ ಕುಮಾರ್ ಪುತ್ತಿಲ – ಬಂಡಾಯ ಸ್ಪರ್ಧೆಗೆ ಮುಂದು!!

Arun Kumar Puttila : ತನ್ನದೇ ಪುತ್ತಲ ಪರಿವಾರವನ್ನು ಕಟ್ಟಿಕೊಂಡು, ಕರಾವಳಿಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿ ಕೊನೆಗೆ ರಾಜಕೀಯ ನಾಯಕರ ಸುಳಿಯಲ್ಲಿ ಸಿಲುಕಿ ಬಿಜೆಪಿ ಸೇರಿದ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಬಂಡಾಯ ಸ್ಪರ್ಧೆಗೆ ಮುಂದಾಗಿದ್ದಾರೆ.

ಹೌದು, ವಿಧಾನಸಭೆಯಲ್ಲಿ ಬಿಜೆಪಿಯನ್ನು ಒಂದು ಹಂತಕ್ಕೆ ಮಣಿಸಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿ ನಾಯಕರು ಕಟ್ಟುಹಾಕಿ, ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ನಂಬಿಸಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಅಗ ಪುತ್ತಿಲ ಕೆಲವೊಂದು ಷರತ್ತುಗಳನ್ನು ವಿಧಿಸಿದ್ದರು. ಆದರೆ ಅದು ಇದುವರೆಗೆ ಈಡೇರಿಲ್ಲ ಎನ್ನುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.
ಮೊನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿಯಾಗಿದ್ದ ಅಟಲ್ ವಿರಾಸತ್ ಕಾರ್ಯಕ್ರಮದಲ್ಲಿ ಅರುಣ್ ಪುತ್ತಿಲ ಸಹಿತ ಪುತ್ತಿಲ ಪರಿವಾರದ ಪ್ರಮುಖರು ಗೈರಾಗಿದ್ದರು. ಈ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಕಾರಣ ಬಿಜೆಪಿ ನಾಯಕರು ಈ ಹಿಂದೆ ಅರುಣ್ ಪುತ್ತಿಲ ಅವರಿಗೆ ನೀಡಿದ್ದ ಮಾತು ಉಳಿಸಿಕೊಂಡಿಲ್ಲ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಪುತ್ತೂರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿರಲಿಲ್ಲ.
ಇನ್ನೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಕೂಡ ಅರುಣ್ ಕುಮಾರ್ ಪುತ್ತಿಲ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಪುತ್ತಿಲ ಪರಿವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ಹರಿದಾಡುತ್ತಿವೆ. ಚುನಾವಣೆಗೆ ಇನ್ನು ಎರಡೂವರೆ ವರ್ಷ ಇರೋವಾಗಲೇ ಈ ರೀತಿ ಬೆಳವಣಿಗೆ ಆರಂಭವಾಗಿದ್ದು, ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದುನೋಡಬೇಕಿದೆ.
Comments are closed.