ಯಕ್ಷಗಾನ ವಿವಾದ: ಬಿಳಿಮಲೆ ಹೇಳಿಕೆಗೆ ಪೇಜಾವರ ಶ್ರೀಗಳು ಹೇಳಿದ್ದೇನು?

ಉಡುಪಿ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಸಲಿಂಗಕಾಮ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಉಡುಪಿಯ ಪೇಜಾವರ ಶ್ರೀಗಳು ಈ ರೀತಿ ಹೇಳಿದ್ದಾರೆ. “ಯಕ್ಷಗಾನ ಕಲಾವಿದರು ಮಹಾನ್ ಕಲಾತಪಸ್ವಿಗಳು, ಯಕ್ಷಗಾನವನ್ನು ಮೆಚ್ಚುವ ಎಲ್ಲರಿಗೂ ಇದೇ ಅಭಿಪ್ರಾಯವಿದೆ.

ಇತ್ತೀಚೆಗೆ ಸಮಾಜದಲ್ಲಿ ಹಿರಿಯರು, ಸಾಹಿತಿಗಳು ಎಂದು ಅನಿಸಿಕೊಂಡಿರುವ ಒಬ್ಬರು ಕಲಾ ತಪಸ್ವಿಗಳ ಬಗ್ಗೆ ಕೀಳು ಅಭಿರುಚಿಯ ಮಾತುಗಳನ್ನಾಡಿದ್ದಾರೆ. ಅವರ ಈ ಹೇಳಿಕೆ ಆಕಾಶವನ್ನು ನೋಡಿ ಉಗುಳಿದ ಹಾಗಾಗಿದೆ ಎಂದು ಪೇಜಾವರ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದರು. ಅವರ ಮಾತಿನಿಂದ ಯಾವುದೇ ಕಲಾರಸಿಕರು ಕಿಂಚಿತ್ತೂ ವಿಚಲಿತರಾಗಲಿಲ್ಲ. ಕಲಾವಿದರು ಕೂಡ ಈ ಹೇಳಿಕೆಯ ಬಗ್ಗೆ ತಲೆಕೆಡಿಸಿಕೊಳ್ಳಬಾರದು ಎಂದು ಅವರು ಸಲಹೆ ನೀಡಿದರು.
Comments are closed.