CM Siddaramiah : ಈ ಒಂದು ಕಾರಣಕ್ಕೆ ಸಿದ್ದು ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು!!

CM Siddaramiah : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ಜೋರಾಗಿ ನಡೆಯುತ್ತಿದೆ. ಈ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿದರು ಕೂಡ, ಯಾವುದೇ ಪ್ರಯೋಜನ ಆಗಿಲ್ಲ. ಆದರೆ ಈಗ ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವಿದೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೆಲವು ತಿಂಗಳ ಹಿಂದೆಯೇ ಸಿದ್ದರಾಮಯ್ಯನವರಿಗೆ ನೀವು ಸಿಎಂ ಆಗಿ ಮುಂದುವರಿಯಿರಿ ಎಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನೀವು ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದೀರಿ. ನಿಮ್ಮ ನಾಯಕತ್ವದ ಅಗತ್ಯವಿದೆ ಎಂದು ರಾಹುಲ್ ಹೇಳಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ.
ರಾಹುಲ್ ಗಾಂಧಿ ಎಲ್ಲೇ ಹೋದರೂ ತಮ್ಮ ಭಾಷಣಗಳಲ್ಲಿ ಅಹಿಂದ ಜನರನ್ನು ಟಾರ್ಗೆಟ್ ಮಾಡಿಯೇ ಮಾತನಾಡುತ್ತಾರೆ. ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ವರ್ಗದವರ ಏಳಿಗೆಯಾಗಬೇಕು ಎನ್ನುತ್ತಿರುತ್ತಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಈಗ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿ ಹೆಚ್ಚು ಒಲವಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಸಿದ್ದು ಇಷ್ಟು ಆತ್ಮವಿಶ್ವಾಸದಿಂದ ನಾನೇ ಪೂರ್ಣಾವಧಿ ಸಿಎಂ ಎನ್ನುತ್ತಿರುವುದು ಎಂಬ ಗುಸು ಗುಸು ಕೇಳಿಬರುತ್ತಿದೆ.
Comments are closed.