Smruthi Mandana : ಮದುವೆಗೆ ಸಂಬಂಧಿಸಿದ ಎಲ್ಲಾ ಫೋಟೋ, ವಿಡಿಯೋಗಳನ್ನು ಡಿಲೀಟ್ ಮಾಡಿದ ಸ್ಮೃತಿ ಮಂದಾನ – ಕುತೂಹಲ ಮೂಡಿಸಿದ ನಡೆ

Smruthi Mandana : ಭಾರತದ ತಾರೆ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮನೆಯಲ್ಲಿ ಒಂದು ದುರಂತ ಘಟನೆ ನಡೆದಿದೆ. ಅವರ ತಂದೆಗೆ ಹೃದಯಾಘಾತವಾಗಿದ್ದು ಇದರಿಂದಾಗಿ ನಿನ್ನೆ ನಡೆಯಬೇಕಿದ್ದ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಈ ಬೆನ್ನಲ್ಲೇ ಸ್ಮೃತಿ ಮಂದಾನ ಬಾವಿಪತಿಗೂ ಕೂಡ ಆರೋಗ್ಯ ಕೈಕೊಟ್ಟಿದೆ. ನಿಲ್ಲದರ ನಡುವೆ ಸ್ಮೃತಿ ಮಂದಾನ ಅವರು ತಮ್ಮ ಸೋಶಿಯಲ್ ಮೀಡಿಯಾ ಗಳಿಂದ ಮದುವೆಗೆ ಸಂಬಂಧಿಸಿದ ಎಲ್ಲಾ ಫೋಟೋ, ವಿಡಿಯೋಗಳನ್ನು ಡಿಲೀಟ್ ಮಾಡಿ ಕುತೂಹಲ ಮೂಡಿಸಿದ್ದಾರೆ.

ಹೌದು, ತಮ್ಮ ಭಾವಿ ಪತಿಯಾದ ಪಲಾಶ್ ಮುಚ್ಚಲ್ ಕೂಡ ಆರೋಗ್ಯ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಬಿಡುಗಡೆಯಾಗಿದ್ದಾರೆ. ಇದೀಗ ಸ್ಮೃತಿ ಅವರು ಮದುವೆ ಮತ್ತು ನಿಶ್ಚಿತಾರ್ಥಕ್ಕೆ ಸಂಬಂಧಿಸಿದ ಎಲ್ಲ ವಿಡಿಯೋಗಳನ್ನು, ಪಲಾಶ್ ಅವರು ಪ್ರಪೋಸ್ ಮಾಡಿದ್ದ ವಿಡಿಯೋವನ್ನು ಕೂಡ ಅಳಿಸಲಾಗಿದೆ. ಸಹ ಆಟಗಾರ್ತಿಯರಾದ ಜೆಮಿಮಾ ರೊಡ್ರಿಗಸ್ ಮತ್ತು ಶ್ರೇಯಾಂಕಾ ಪಾಟೀಲ್ ಅವರಂತಹ ಆಪ್ತ ಸ್ನೇಹಿತರು ಮತ್ತು ತಂಡದ ಸದಸ್ಯರು ಸಹ ವಿಡಿಯೋಗಳನ್ನು ಅಳಿಸಿರುವುದು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಅಂದಹಾಗೆ ಕಳೆದ ಕೆಲವು ದಿನಗಳಿಂದ ಸ್ಮೃತಿ ಅವರ ಸಾಮಾಜಿಕ ಮಾಧ್ಯಮ ಚಟುವಟಿಕೆಗಳನ್ನು ಬಹುತೇಕ ಎಲ್ಲರೂ ಗಮನಿಸುತ್ತಿದ್ದರು. ಇದೀಗ ಮದುವೆಗೆ ಸಂಬಂಧಿಸಿದ ಎಲ್ಲ ಪೋಸ್ಟ್ಗಳು, ನಿಶ್ಚಿತಾರ್ಥದ ಘೋಷಣೆ, ರೀಲ್ಗಳು ಮತ್ತು ಪ್ರಪೋಸಲ್ ವಿಡಿಯೋ ಕೂಡ ಅವರ ಖಾತೆಯಿಂದ ಕಣ್ಮರೆಯಾಗಿವೆ.
Comments are closed.