ಪ್ರಧಾನಿ ಮೋದಿ ಉಡುಪಿ ಭೇಟಿ: ಭಾರೀ ಭದ್ರತೆ, ದೇಗುಲಕ್ಕೆ ಬರುವವರಿಗೆ ಈ ಮಾರ್ಗಸೂಚನೆ ಪಾಲನೆ ಕಡ್ಡಾಯ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನ.28ಕ್ಕೆ ಭೇಟಿ ನೀಡಲಿರುವ ಕಾರಣ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದಾರೆ. ಇದರ ಪ್ರಕಾರ, ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ ವಠಾರ ಹಾಗೂ ಪ್ರವಾಸಿ ಮಂದಿರದ ಸುತ್ತಮುತ್ತ ಇರುವ ಅಂಗಡಿ–ಮುಂಗಟ್ಟುಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಇದೇ ರೀತಿ ಪ್ರಧಾನಿ ಸಂಚರಿಸುವ ಮಾರ್ಗದ ಎರಡೂ ಬದಿಯಲ್ಲಿರುವ ಅಂಗಡಿಗಳನ್ನೂ ನವೆಂಬರ್ 28ರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಡಳಿತ ನಿರ್ದೇಶಿಸಿದೆ.

ನವೆಂಬರ್ 26 ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ‘ನೋ ಫ್ಲೈ ಜೋನ್’ ಎಂದು ಘೋಷಿಸಲಾಗಿದೆ.
ಪ್ರಧಾನಿಯ ವೀಕ್ಷಣೆಗೆ ಬರುವ ಸಾರ್ವಜನಿಕರು ಬ್ಯಾಗ್, ನೀರಿನ ಬಾಟಲ್, ಧ್ವಜ, ಸ್ಟಿಕರ್, ಬಲೂನು, ಪಟಾಕಿ, ಲೂಸ್ ಪಾಲಿಥಿನ್ ವಸ್ತುಗಳನ್ನು ತರದಂತೆ ಸೂಚಿಸಲಾಗಿದೆ. ಆದೇಶ ಉಲ್ಲಂಘನೆ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
Comments are closed.