D K Shivkumar : ಕೊಟ್ಟ ಮಾತನ್ನು ಉಳಿಸಿಕೊಳ್ಳಿ – ಪೋಸ್ಟ್ ಹಾಕಿ ಕಾಂಗ್ರೆಸ್ ಹೈಕಮಾಂಡ್ ಗೆ ತಿವಿದ ಡಿಕೆಶಿ

Share the Article

D K Shivkumar : ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಮುಸುಕಿನ ಗುದ್ದಾಟ ಬಹಿರಂಗವಾಗುತ್ತಾ ಜೋರಾಗುತ್ತಿದೆ. ಡಿಕೆ ಶಿವಕುಮಾರ್ ಸಿಕ್ಕಸಿಕ್ಕ ದೇವಸ್ಥಾನಗಳಿಗೆ ತೆರಳಿ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಇದರ ನಡುವೆಯೇ ಡಿಕೆಶಿ ಪೋಸ್ಟ್ ಒಂದನ್ನು ಹಾಕಿ ಕಾಂಗ್ರೆಸ್ ಹೈಕಮಾಂಡ್ ಗೆ ಟಾಂಗ್ ನೀಡಿದ್ದಾರೆ.

ಹೌದು, ಕರ್ನಾಟಕದ ಮುಖ್ಯಮಂತ್ರಿ ಜಗಳ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿ ಅನೇಕ ದಿನಗಳೇ ಕಳೆದಿವೆ. ಆದರೂ ಕೂಡ ಹೈಕಮಾಂಡ್ ಈ ಕಡೆ ತಲೆ ಕೂಡ ಹಾಕಿ ಮಲಗಿಲ್ಲ. ಈ ವಿಚಾರಕ್ಕೆ ತುಂಬಾ ಬೇಸರಗೊಂಡಿರುವ ಡಿಕೆ ಶಿವಕುಮಾರ್ ಅವರು ಇದೀಗ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಅದರಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬುದಾಗಿ ತೀಕ್ಷ್ಣವಾಗಿಯೇ ಕಿಡಿ ಕಾರಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸಭೆ ಬಳಿಕ ದೆಹಲಿಯಲ್ಲಿ ನಡೆದ ಮಹತ್ವ ಚರ್ಚೆಗಳು, ಸಭೆಯಲ್ಲಿ ನೀಡಿದ್ದ ಭರವಸೆಯನ್ನು ವರಿಷ್ಠರಿಗೆ ನೆನಪಿಸುವ ಕೆಲಸ ಮಾಡಿದ್ದಾರೆ

ಯಸ್, ಡಿಕೆ ಶಿವಕುಮಾರ್ ಅವರು ಗುರುವಾರ ಬೆಳಗ್ಗೆ, “”ಪದ ಶಕ್ತಿಯೇ ವಿಶ್ವ ಶಕ್ತಿ’, “ಜಗತ್ತಿನ ಅತಿದೊಡ್ಡ ಶಕ್ತಿ ಎಂದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಅಥವಾ ನಾನು ಸೇರಿದಂತೆ ಬೇರೆ ಯಾರೇ ಆಗಿರಲಿ, ಎಲ್ಲರೂ ಹೇಳಿದಂತೆ ನಡೆಯಬೇಕು. ಪದ ಶಕ್ತಿಯೇ ವಿಶ್ವ ಶಕ್ತಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Comments are closed.