Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ

Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರವಾಗಿ ಪ್ರಧಾನಿ ಮೋದಿಗೆ (PM Modi) ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಮನವಿ ಸಲ್ಲಿಸಿದರು.ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ ಹಿನ್ನೆಲೆ ಮಂಗಳೂರಿಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಪರವಾಗಿ ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು. ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್ ಹಂಚಿಕೊಂಡಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Comments are closed.