Belthangady: ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ

Belthangady: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷ ಪ್ರಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತ ಬಾಲಕಿ ವೇಣೂರು ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದಾಗ ಅಲ್ಲಿದ್ದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ. ಇದಾದ ಬಳಿಕ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಬಳಿಕ ಬಾಲಕಿ ಗರ್ಭಿಣಿ ಯಾಗಿದ್ದಾಳೆ ಅನಾರೋಗ್ಯದ ಕಾರಣ ವೇಣೂರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಬಾಲಕಿ ಗರ್ಭಿಣಿ ಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಆರೋಪಿ ಅಮೃತ್ ಖಾನ್ (18) ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Comments are closed.