Government: ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ: ರಾಜ್ಯ ಸರ್ಕಾರ ಆದೇಶ

Government: ರೈತರ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ನೈಸರ್ಗಿಕ ವಿಕೋಪಗಳಾದ ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ, ಆಲಿಕಲ್ಲು ಮಳೆಯಿಂದ ಸ್ಥಳೀಯವಾಗಿ ಉಂಟಾಗುವ ಬೆಳೆಹಾನಿ ಪ್ರಕರಣಗಳಲ್ಲಿ ಅರ್ಹ ಸಾರ್ವಜನಿಕರಿಗೆ, ರೈತ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಬರ ಪರಿಹಾರದ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಆದರೆ, ಕೆಲ ಬ್ಯಾಂಕ್ ಅಧಿಕಾರಿಗಳು ರೈತರ ಪರಿಹಾರದ ಮೊತ್ತವನ್ನು ಅವರ ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ದೂರುಗಳು ಕೇಳಿಬಂದಿದ್ದು,ಇದಕ್ಕಾಗಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
Comments are closed.