Puttur: ಪಡೀಲ್ ಚಿಕನ್ ಸೆಂಟರಿನ ಬದ್ರುದ್ದೀನ್ ನಾಪತ್ತೆ!

Puttur: ಪುತ್ತೂರು ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ.ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದೆ. ಪುತ್ತೂರು ನಗರ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Comments are closed.