High Court: ಕ್ರಿಶ್ಚಿಯನ್ ಗೆ ಕನ್ವರ್ಟ್ ಆದವರಿಗೆ SC, ST ಕಾಯ್ದೆಯಡಿ ರಕ್ಷಣೆ ಇಲ್ಲ – ಹೈಕೋರ್ಟ್ ಮಹತ್ವದ ಆದೇಶ

Share the Article

High Court: ಕ್ರಿಶ್ಚಿಯನ್ ಗೆ ಕನ್ವರ್ಟ್ ಆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಇನ್ನು ಮುಂದೆ ಯಾವುದೇ ರೀತಿಯಲ್ಲೂ ಎಸ್ಸಿ, ಎಸ್ಟಿ ಕಾಯ್ದೆಯ ಡಿ ರಕ್ಷಣೆಯನ್ನು ನೀಡಲಾಗುವುದಿಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ.

ಹೌದು, ಜಾತಿ ವ್ಯವಸ್ಥೆಗೆ ಮಾನ್ಯತೆ ಇಲ್ಲದ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ರಕ್ಷಣಾ ನಿಬಂಧನೆಗಳನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಾಲಯವು ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ಆಧಾರಿತ ವ್ಯವಸ್ಥೆ ಇಲ್ಲ. ಆದ್ದರಿಂದ ಪರಿಶಿಷ್ಟ ಜಾತಿಯ ವರ್ಗೀಕರಣದ ಪ್ರಕಾರ ವ್ಯಕ್ತಿಯೊಬ್ಬರು ಆ ಧರ್ಮಕ್ಕೆ ಮತಾಂತರಗೊಂಡ ನಂತರ, ಹಿಂದಿದ್ದ ಜಾತಿ ಪ್ರಮಾಣಪತ್ರ ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪಿನಲ್ಲಿ ವಿವರಿಸಿದೆ.

ಅಲ್ಲದೆ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ರಕ್ಷಿಸುವುದು ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆ ಉದ್ದೇಶವಾಗಿದೆ. ಹಾಗಾಗಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ವ್ಯಕ್ತಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ತಕ್ಷಣ ತಮ್ಮ ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಈ ಕಾಯ್ದೆಯಲ್ಲಿನ ರಕ್ಷಣಾತ್ಮಕ ನಿಬಂಧನೆಗಳನ್ನು ವಿಸ್ತರಿಸಲಾಗುವುದಿಲ್ಲ’ ಎಂದು ಪೀಠ ತಿಳಿಸಿದೆ.

Comments are closed.