Kodi Shri : ಈ ಹಬ್ಬದ ಬಳಿಕ ಮುಖ್ಯಮಂತ್ರಿ ಬದಲಾವಣೆ ಖಚಿತ – ಕೋಡಿ ಶ್ರೀಗಳಿಂದ ಅಚ್ಚರಿ ಭವಿಷ್ಯ!!

Share the Article

Kodi Shri : ರಾಜ್ಯ ರಾಜಕೀಯದ ಕುರಿತು ಸಾಕಷ್ಟು ಭವಿಷ್ಯಗಳನ್ನು ನಡೆಯುವ ಕೋಡಿಮಠದ ಶ್ರೀಗಳು ಇದೀಗ ಸಂಕ್ರಾಂತಿ ನಂತರ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಹೌದು, ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಮುಂದಿನ ವರ್ಷದ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯವಾಗಲಿದೆ. ಮಕರ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಅಲ್ಲದೆ ನಾನು ಶಾಸ್ತ್ರ ಹೇಳುವವನಲ್ಲ, ಶಾಸ್ತ್ರಕಾರನಲ್ಲ. ಮುಂದೆ ನಡೆಯುವ ವಿಚಾರಗಳನ್ನು ತಿಳಿಸುವ ಶಕ್ತಿ ಹೊಂದಿದ್ದೇನೆ. ಅದೇ ರೀತಿ ರಾಷ್ಟ್ರ ರಾಜಕಾರಣದಲ್ಲಿಯೂ ಯುಗಾದಿ ಬಳಿಕ ಸಮಸ್ಯೆ ಎದುರಾಗಲಿದೆ ಎಂದು ಹೇಳಿದ್ದಾರೆ.

Comments are closed.