Chikkamaglur : ಬ್ಯಾನರ್ ತೆರೆದ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊ*ಲೆ- ಬಜರಂಗದಳ ಕಾರ್ಯಕರ್ತರಿಂದ ಕೃತ್ಯ?

Chikkamaglur : ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದಲ್ಲಿ ನಡೆಡಿದೆ. ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ.
ಗಲಾಟೆಯಲ್ಲಿ ಬಜರಂಗದಳ ಕಾರ್ಯಕರ್ತ ಸಂಜಯನಿಗೂ ಗಾಯಗಳಾಗಿವೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಂಜಯ್ ದಾಖಲಾಗಿದ್ದು, ಮಿಥುನ್ ಪರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ಸಖರಾಯಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ದತ್ತ ಜಯಂತಿ ಮುಗಿದ ಹಿನ್ನೆಲೆ ಸಖರಾಯಪಟ್ಟಣ ಬಸ್ ನಿಲ್ದಾಣ ಬಳಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.
Comments are closed.