ಇಂದು ಉಡುಪಿಗೆ ನಟ ಪವನ್ ಕಲ್ಯಾಣ್ ಭೇಟಿ

ಉಡುಪಿ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಅವರು ಇಂದು ಉಡುಪಿಗೆ ಆಗಮಿಸಲಿದ್ದಾರೆ.

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ಆಯೋಜಿಸಿರುವ ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದ ಸಮಾರೋಪದಲ್ಲಿ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 3.30 ಕ್ಕೆ ಉಡುಪಿಗೆ ಆಗಮಿಸಲಿರುವ ಪವನ್ ಕಲ್ಯಾಣ್ ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ.
ಅನಂತರ ರಾಜಾಂಗಣದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತ ಪಾರಾಯಣ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Comments are closed.