Darshan: ಜೈಲಿನಲ್ಲೂ ನಿಲ್ಲದ ದರ್ಶನ್ ದರ್ಪ- ಸಹ ಕೈದಿಗೆ ಹಿಗ್ಗಾ ಮುಗ್ಗಾ ಥಳಿತ 

Share the Article

Darshan+ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜೈಲಿನಲ್ಲೂ ದರ್ಪ ಮೆರೆದಿದ್ದು, ಸಹ ಕೈದಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಜೈಲಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ.

ನಟ ದರ್ಶನ್‌ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಜೊತೆಗೆ ಒಂದೇ ಸೆಲ್‌ನಲ್ಲಿ ಇದ್ದಾರೆ. ಈ ಪೈಕಿ ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಇದಲ್ಲದೇ ಕೆಲ ದಿನಗಳ ಹಿಂಧೆ ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆ ಎನ್ನಲಾಗಿದ್ದು, ಗಲಾಟೆ ಕೇಳಿಸಿಕೊಂಡ ಕಾರಗೃಹದ ಸಿಬ್ಬಂದಿ ಬಂದು ಜಗಳವನ್ನು ಬಿಡಿಸಿದ್ದಾರೆ ಎನ್ನಲಾಗಿದೆ. ಇದಲ್ಲದೇ ಸಹ ಖೈದಿಗಳನ್ನು ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ಬೈದು ತಮ್ಮ ದಬ್ಬಾಳಿಕೆಯನ್ನು ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ವಕೀಲರ ನೇಮಕ ವಿಚಾರವಾಗಿಯೂ ಎಲ್ಲರ ನಡುವೆ ಗಲಾಟೆ ಶುರುವಾಗಿದೆ. ಅಲ್ಲದೇ ನಾನು ಇಲ್ಲೆ ಇದ್ದರೆ ಸಾಯೋದಾಗಿ ಅನುಕುಮಾರ್ ಹೇಳಿಕೊಂಡಿದ್ದಾರಂತೆ. ಅನುಕುಮಾರ್​ಗೆ ಜಾಮೀನು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ದರ್ಶನ್ ಚಿತ್ರಹಿಂಸೆ ತಡೆಯಲಾಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ಹೀಗಾಗಿ, ದರ್ಶನ್ ಸೆಲ್​ ಮೇಲೆ ವಿಶೇಷ ಕಾಳಜಿ ಇಡಲಾಗಿದೆ. ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.

Comments are closed.