RCB ಅಭಿಮಾನಿಗಳಿಗೆ ಡಿಕೆ ಶಿವಕುಮಾರ್‌ ನೀಡಿದ ಸಿಹಿ ಸುದ್ದಿ ಬೆನ್ನಲ್ಲೇ ಐಪಿಎಲ್‌ಗೆ ವಿಘ್ನ

Share the Article

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಮ್ಯಾಚ್‌ಗಳನ್ನು ಆಯೋಜನೆ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳನ್ನು ಆಯೋಜನೆ ಮಾಡಬಾರದು ಎಂದು ಹಿರಿಯ ವಕೀಲ ಅಮೃತೇಶ್‌ ಎಂಬುವವರು ಸಂಬಂಧಪಟ್ಟ ಎಲ್ಲಾ ಇಲಾಖೆ, ಅಧಿಕಾರಿಗಳಿಗೆ ಮನವಿ ಮಾಡಿದ್ದು, ಈ ಕುರಿತು ಹೈಕೋರ್ಟ್‌ಗೂ ಅಪೀಲು ಸಲ್ಲಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರೀಯ ಮಟ್ಟದ ಮ್ಯಾಚ್‌ ನಡೆಯುವಂತೆ ಮಾಡಲು ಪ್ರಯತ್ನ ಪಡುವುದಾಗಿ ಹೇಳಿದ್ದರು. ಐಪಿಎಲ್‌ ಪಂದ್ಯಗಳ ಆಯೋಜನೆಗೆ ಅನುಮತಿ ದೊರಕಿಸಲು ಯತ್ನ ಮಾಡುವುದಾಗಿ ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಅಮೃತೇಶ್‌ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಅಪೀಲ್‌ ಸಲ್ಲಿಸಿದ್ದಾರೆ.

Comments are closed.