OPS: ‘ಹಳೆ ಪಿಂಚಣಿ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್- ಸರ್ಕಾರದಿಂದ ಹೊರ ಬಿತ್ತು ಆದೇಶ!!

Share the Article

OPS: ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಒಂದು ವಾರದ ಒಳಗಡೆ ವರದಿಯನ್ನು ಸಲ್ಲಿಸುವುದಾಗಿ ತಿಳಿಸಿದೆ.

ಹೌದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ NPS ರದ್ಧು ಮಾಡಿ OPS(Old pension scheme) ಜಾರಿ ಮಾಡಲು ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ವರದಿಯನ್ನು ಒಂದು ವಾರದೊಳಗಾಗಿ ಸರ್ಕಾರಕ್ಕೆ ಸಲ್ಲಿಸುವ ಭರವಸೆ ನೀಡಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ಹೋಗಲಾಡಿಸಿ, ಈ ಹಿಂದಿನ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಸಂಬಂಧ, ಒಪಿಎಸ್ ಜಾರಿಗೊಳಿಸಿರುವ ದೇಶದ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಮಿತಿ ರಚಿಸಿತ್ತು. ಸಮಿತಿಯು ಈ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನೌಕರರ ಸಂಘ ಒತ್ತಾಯಿಸುತ್ತಲೆ ಬಂದಿತ್ತು. ಕಳೆದ ಡಿ. 03 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದ ನಿಯೋಗವು ಎನ್‍ಪಿಎಸ್ ಸಮಿತಿಯ ಸದಸ್ಯರು ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಎಂ.ಟಿ. ರೇಜು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ, ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ಒಂದು ವಾರದೊಳಗೆ ಸಮಿತಿಯು ಸಭೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿರುತ್ತಾರೆ.

Comments are closed.