Smruthi -Palash: ಮದುವೆ ಕ್ಯಾನ್ಸಲ್ ಬಳಿಕ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿಕೊಂಡ ಸ್ಮೃತಿ, ಪಲಾಶ್!!

Smruthi -Palash: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ತಮ್ಮ ವಿವಾಹದ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆಯನ್ನು ಕ್ಯಾನ್ಸಲ್ ಮಾಡಲಾಗಿದ್ದು, ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ನಾನು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಪಾಲಾಶ್ ಮುಚ್ಚಲ್ ಕೂಡ ಪ್ರತಿಕ್ರಿಯೆ ನೀಡಿದ್ದರು. ಇದೀಗ ಇಬ್ಬರು ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿಕೊಂಡಿದ್ದಾರೆ

ಹೌದು, ಸ್ಮೃತಿ ಮತ್ತು ಪಲಾಶ್ ಮದುವೆ ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಈ ವಿಷಯದ ಬಗ್ಗೆ ತಮ್ಮ ಮೌನವನ್ನು ಮುರಿದ ಮಂಧಾನ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ, ಕುಟುಂಬಗಳು ವಿವಾಹವನ್ನು ರದ್ದುಗೊಳಿಸಿವೆ ಎಂದು ದೃಢಪಡಿಸಿದ್ದಾರೆ. ಇದೀಗ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಛಲ್ ಅವರು ಇನ್ಸ್ಟಾಗ್ರಾಂನಲ್ಲಿ ಪರಸ್ಪರ ‘ಅನ್ಫಾಲೋ’ ಮಾಡಿಕೊಂಡಿದ್ದಾರೆ. ಆದರೆ, ಇವರಿಬ್ಬರೂ ಈ ಹಿಂದೆ ಹಂಚಿಕೊಂಡಿದ್ದ ಕೆಲವು ಚಿತ್ರಗಳು ಅವರವರ ಖಾತೆಗಳಲ್ಲಿ ಹಾಗೇ ಉಳಿದಿವೆ.
Comments are closed.