ಚಿಂದಿ ಆಯುವವನ ಮೇಲೆ ಹಲ್ಲೆ: ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲು

ಬೆಂಗಳೂರು: ಬಾಂಗ್ಲಾ ವಲಸಿಗ ಎಂದು ಚಿಂದಿ ಆಯುವವನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಡಿ.3 ರಂದು ರಾತ್ರಿ ಚಿಂದಿ ಆಯುತ್ತಿದ್ದ ಜಹಂಗೀರ್ ಆಲಂ ಎನ್ನುವವನ ಮೇಲೆ ಬಾಂಗ್ಲಾ ನುಸುಳುಕೋರ ಎಂದು ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ಕತ್ತಿನಪಟ್ಟಿ ಹಿಡಿದು ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆಗೊಳಗಾದ ಜಹಂಗೀರ್ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುನೀತ್ ಕೆರೆಹಳ್ಳಿಯ ವಿರುದ್ಧ ಪ್ರಕರಣ ದಾಖಲಾಗಿದೆ, ನೋಟಿಸ್ ಜಾರಿ ಮಾಡಲಾಗಿದೆ.
Comments are closed.