BJP Protest: ಸುವರ್ಣ ಸೌಧ ಮುತ್ತಿಗೆಗೆ ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

BJP Protest: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, ಕಾರ್ಯಕರ್ತರು ಪಾದಯಾತ್ರೆ ಹೊರಟರು. ಪ್ರತಿಭಟನೆ ಸ್ಥಳದಿಂದ ಹೈವೇವರೆಗೂ ಪಾದಯಾತ್ರೆ ಬಂದ ಬಿಜೆಪಿ ನಾಯಕರು, ರೈತರು ಬೆಳಗಾವಿ ಸರ್ವಿದ್ ರಸ್ತೆ ಮೇಲೆಯೇ ಸಾಗಿದರು. ಹಲಗಾ ಮಾರ್ಗವಾಗಿ ಸೌಧ ಬಳಿ ಹೊರಟ ಮೆರವಣಿಗೆಯನ್ನು ಪೊಲೀಸರು ತಡೆದರು.
ಬಿಜೆಪಿ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.ಇದಕ್ಕೂ ಮೊದಲು ಬೆಳಗಾವಿ ಮಾಲಿನಿ ಗ್ರೌಂಡ್‌ನಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಹಿಡಿದು ವೇದಿಕೆ ಮೇಲೆ ನಾಯಕರು, ರೈತ ಪ್ರಮುಖರು ಇದ್ದರು. ರೈತರ ಹೋರಾಟದಲ್ಲಿ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡರು.ಬಿಜೆಪಿ ಮತ್ತು ರೈತರ ಪ್ರತಿಭಟನೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿತು. ರೈತರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುವ ಕೆಲಸ ಮಾಡಬೇಕು, ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ನಾವು ಬಿಡಲ್ಲ. ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು, ಎರಡು ಜಿಲ್ಲೆ ಆಗಬೇಕು, ಚಿಕ್ಕೋಡಿ ಮತ್ತು ಗೋಕಾಕ್ ಜಿಲ್ಲೆಗಳಾಗಿ ವಿಭಜನೆ ಮಾಡಿ, ಬೆಳಗಾವಿ ಜಿಲ್ಲೆ ವಿಭಜನೆ ಮಾಡದಿದ್ದಲ್ಲಿ ಉ.ಕ ಭಾಗಕ್ಕೆ ಮಲತಾಯಿ ಧೋರಣೆ ಮುಂದುವರೆಸಿದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆ ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
Comments are closed.