Cricket: ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ: ಕಟಕ್‌ನಲ್ಲಿ ಮೊದಲ ಪಂದ್ಯ

Share the Article

Cricket: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಇಂದು ಆರಂಭವಾಗಲಿದೆ. ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯ ಕಟಕ್ ನಲ್ಲಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. ಸರಣಿಯ ಮೊದಲ ಪಂದ್ಯ ಕಟಕ್‌ನ ಬಾರಾಬತಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾ‌ರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ತಮ್ಮ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ, ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವ ಸವಾಲು ಎದುರಾಗಿದೆ. ಇತ್ತ ದಕ್ಷಿಣ ಆಫ್ರಿಕಾ ಕೂಡ ಏಕದಿನ ಸರಣಿಯ ಸೋಲಿಗೆ ಟಿ20 ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ಯೋಜನೆಯಲ್ಲಿದೆ.

ಮೊದಲ ಪಂದ್ಯ- ಬಾರಾಬತಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ (ಕಟಕ್)

ದ್ವಿತೀಯ ಪಂದ್ಯ- ಪಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್‌ ಮೈದಾನ(ಚಂಡೀಗಢ)

ಮೂರನೇ ಪಂದ್ಯ-ಧರ್ಮಶಾಲಾ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ

ನಾಲ್ಕನೇ ಪಂದ್ಯ-ಲಖನೌ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ

ಕೊನೆಯ ಪಂದ್ಯ-ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

Comments are closed.