ಅಮ್ಮನ ಮೇಲೆ ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ

Share the Article

ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ಹೆತ್ತ ತಾಯಿ ಮೇಲೆಯೇ ಅತ್ಯಾಚಾರ ಎಸಗಿದ್ದಾತನಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಚಿನ್ನಹಳ್ಳಿ ಗ್ರಾಮದ 38 ವರ್ಷದ ಅಶೋಕ ಎಂಬಾತ ಶಿಕ್ಷೆಗೊಳಗಾದಾತ. ಆತ ಕಳೆದ ವರ್ಷ, 2024ರ ಆ.5ರಂದು ರಾತ್ರಿ ಪಾನಮತ್ತನಾಗಿ ಮನೆಗೆ ಬಂದಿದ್ದ. ಈ ವೇಳೆ ಮನೆಯಲ್ಲಿ ಮಲಗಿದ್ದ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಆತನ ಮೇಲೆ ಕೇಳಿಬಂದಿತ್ತು. ಈ ಬಗ್ಗೆ ಗುಡಿಬಂಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಇದೀಗ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.

Comments are closed.