ಸಾವಿರಾರು ಕನ್ನಡ ಶಾಲೆ ಮುಚ್ಚುವ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿಕೆ

Share the Article

ಬೆಳಗಾವಿ: ರಾಜ್ಯದಲ್ಲಿ ಸಾವಿರಾರು ಕನ್ನಡ ಶಾಲೆಗಳನ್ನು ಮು ಮುಚ್ಚುವ ಬಗ್ಗೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲಾಗುತ್ತಿದೆ ಅನ್ನುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ ಎಂ.ಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕನ್ನಡ ನನ್ನ ರಕ್ತದಲ್ಲಿದೆ. ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ ಎಂದಿದ್ದಾರೆ. ಆದರೆ ಮಕ್ಕಳ ಭವಿಷ್ಯವನ್ನೂ ನೋಡಬೇಕು ಎಂದು ಅವರು ಹೇಳಿದರು.

ಈ 2025-26ನೇ ಸಾಲಿನಲ್ಲಿ 900 ಸರಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಿ, ಹಂತ ಹಂತವಾಗಿ ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ ಕೆಪಿಎಸ್ ಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಜಾಗದ ಜತೆಗೆ ಕಟ್ಟಡ ಲಭ್ಯವಿರುವ ಸ್ಥಳಗಳಲ್ಲಿ 1ರಿಂದ 12ನೇ ತರಗತಿವರೆಗೆ ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು ಎಂದವರು ಹೇಳಿದ್ದಾರೆ.

Comments are closed.