IT Corridor: ಬೆಂಗಳೂರು ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ.: ಡಿಸಿಎಂ

Share the Article

IT Corridor: ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಐಟಿ ವಲಯಕ್ಕೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಕೆಶಿ, ಐಟಿ ಕಾರಿಡಾರ್ ಅಭಿವೃದ್ಧಿಗೆ ನಮ್ಮ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ. ಬೆಂಗಳೂರಿನ ಸಮಗ್ರ ಅಭಿವೃದ್ದಿಯೇ ನಮ್ಮ ಆದ್ಯತೆ ಎಂದು ತಿಳಿಸಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಆರ್ ಪುರಂ ವರೆಗೆ ಐಟಿ ಕಾರಿಡಾರ್ ಹೊರವರ್ತುಲ ರಸ್ತೆ ಅಭಿವೃದ್ಧಿ, 20.50 ಕಿ.ಮೀ ಉದ್ದದ ರಸ್ತೆಯನ್ನ 400 ಕೋಟಿ ಮೊತ್ತದಲ್ಲಿ ವಿಶ್ವ ದರ್ಜೆ ಮಟ್ಟದಲ್ಲಿ ಅಭಿವೃದ್ಧಿ, ಐಟಿ ಕಾರಿಡಾರ್ ಟ್ರಾಫಿಕ್ ಸಮಸ್ಯೆ ನಿವಾರಣೆ ಆಗಲಿದೆ ಎಂದಿದ್ದಾರೆ.

Comments are closed.