Belagavi: ಬೆಳಗಾವಿ ಜಿಲ್ಲೆ ವಿಭಜನೆ? ಮೂರು ಕೇಂದ್ರಗಳತ್ತ ಸರ್ಕಾರದ ಕಣ್ಣು

Share the Article

Belagavi: ಉತ್ತರ ಕರ್ನಾಟಕ ಭಾಗವು ಪ್ರತಿಯೊಂದು ವಲಯದಲ್ಲೂ ನಿರಂತರವಾಗಿ ಅನ್ಯಾಯ, ತಾರತಮ್ಯ ಮತ್ತು ನಿರ್ಲಕ್ಷ್ಯವನ್ನು ಎದುರಿಸುತ್ತಿದೆ. ಈ ಭಾಗದ 15 ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ರಾಜ್ಯ ರಚಿಸಬೇಕುʼ ಎಂದು ಉಲ್ಲೇಖಿಸಿ ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆ ಅವರು ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರು ಹಾಗೂ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು, ಇದೀಗ ಬೆಳಗಾವಿ ಜಿಲ್ಲೆ ವಿಭಜನೆಗೆ ಕೂಗು ಕೇಳಿ ಬಂದಿದ್ದು, ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ.

ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಂತೆ ಒತ್ತಾಯಿಸಿತು. ಬೆಳಗಾವಿಯನ್ನು ಸಣ್ಣ ಜಿಲ್ಲೆಯಾಗಿ ಉಳಿಸಿಕೊಂಡು ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳನ್ನು ರಚಿಸುವುದು ಬೇಡಿಕೆಯಾಗಿದೆ.

18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರಿನ ಹೊರಗಿನ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದೆ.ಇದಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಬಾಲಚಂದ್ರ ಅವರ ಸಹೋದರ ಸತೀಶ್ ಜಾರಕಿಹೊಳಿ, ನಮ್ಮ (ಕಾಂಗ್ರೆಸ್) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಾವೆಲ್ಲರೂ ಒತ್ತಡ ಹೇರುತ್ತಿದ್ದೇವೆ. ಶಾಸಕರು ಇದರ ಪರವಾಗಿದ್ದಾರೆ. ಬಹುಶಃ, ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು. ಇನ್ನೂ ಬೆಳಗಾವಿಯ ಜಿಲ್ಲೆಯನ್ನ ಮೂರು ಕೇಂದ್ರಗಳನ್ನಾಗಿ ವಿಭಜಿಸಲು ಬೆಳಗಾವಿ ಜನಪ್ರತಿನಿಧಿಗಳು ಒತ್ತಡ ಹಾಕುತ್ತಿದ್ದು, ಬೆಳಗಾವಿ ಜಿಲ್ಲೆಯನ್ನ ಚಿಕ್ಕೋಡಿ, ಗೋಕಾಕ್‌ ಹಾಗೂ ಬೈಲಹೊಂಗಲ ಕೇಂದ್ರಗಳಾಗಿ ವಿಭಜಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.ಇನ್ನೂ ಬೆಳಗಾವಿ ವಿಭಜನೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಗುಡ್ ನ್ಯೂಸ್ ಆಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೂ ಮಾತನಾಡಿದ್ದು, ಸ್ಥಳೀಯ ಶಾಸಕರು ಒಗ್ಗಟ್ಟಿನಿಂದ ನಿರ್ಧಾರ ಕೈಗೊಳ್ಳಬೇಕಿದೆ. ಇನ್ನು ರಾಜ್ಯವನ್ನು ದಕ್ಷಿಣ ಮತ್ತು ಉತ್ತರ ಕರ್ನಾಟಕ ಎಂದು ವಿಭಜನೆ ಮಾಡುವುದು ಸರಿಯಲ್ಲ. ನಾವೆಲ್ಲರೂ ಅಖಂಡ ಕರ್ನಾಟಕ ಚಿಂತನೆ ಇಟ್ಟುಕೊಂಡೇ ಅಭಿವೃದ್ಧಿ ಕಡೆಗೆ ಗಮಗ ಹರಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಬೆಳಗಾವಿ ಮತ್ತು ಚಿಕ್ಕೋಡಿ ಎಂದು ಎರಡು ಜಿಲ್ಲೆಗಳನ್ನು ರಚಿಸುವ ವಿಚಾರದ ಬಗ್ಗೆ ಮಂಗಳೂರಿಗೆ ಹೋಗುವಾಗ ನಾನು ಮತ್ತು ಸಚಿವ ಸತೀಶ್ ಜಾರಕಿಹೋಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇವೆ. ಹೊಸ ಜಿಲ್ಲೆ ರಚನೆ ಬಗ್ಗೆ ಸಿಎಂ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಆಡಳಿತಾತ್ಮಕ ಅನುಕೂಲಕ್ಕಾಗಿ ಜಿಲ್ಲೆಯ ವಿಭಜನೆಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಕೆಲವರು ವಿಭಜನೆಗೆ ಪರ-ವಿರೋಧ ಇರುತ್ತಾರೆ. ಆದರೆ, ಆಡಳಿತ ದೃಷ್ಟಿಯಿಂದ ಈ ವಿಭಜನೆ ವಿಚಾರವು ಒಂದು ಉತ್ತಮ ನಿರ್ಧಾರ ಆಗಲಿದೆ ಎಂದು ಅಭಿಪ್ರಾಯಪಟ್ಟರು.

Comments are closed.