Guarantees: ಶ್ರೀಮಂತರಿಗೆ ‘ಫ್ರೀ ಕರೆಂಟ್’, ಲಕ್ಷ ಸಂಪಾದಿಸುವ ಮಹಿಳೆಯರಿಗೆ ‘ಫ್ರೀ ಬಸ್’ ಕೊಡೋದು ಎಷ್ಟು ಸರಿ? CLP ಸಭೆಯಲ್ಲಿ ಕಾಂಗ್ರೆಸ್ ಶಾಸಕರ ಆಕ್ರೋಶ

Share the Article

Guarantees: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಬಳಿಕ ಅವುಗಳನ್ನು ಜಾರಿ ಕೂಡ ಮಾಡಿದೆ. ಆದರೆ ಈಗ ಗ್ಯಾರೆಂಟಿ ಯೋಜನೆಗಳ ಕುರಿತು ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಇದೀಗ ಸಿ ಎಲ್ ಪಿ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಕೂಡ ಈ ಗ್ಯಾರಂಟಿಗಳ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹೌದು, ಆಡಳಿತ ಪಕ್ಷ ಕಾಂಗ್ರೆಸ್ ಶಾಸಕರೇ ಗ್ಯಾರಂಟಿಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ, ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಎಂಎಲ್‌ಸಿ ಸುಧಾಮ್ ದಾಸ್ ಅವರು ಸಿಎಲ್‌ಪಿ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಆಗ್ರಹಿಸಿದ್ದಾರೆ. ಸಭೆಯಲ್ಲಿ ಅವರು ಬೆಂಗಳೂರಿನ ಸದಾಶಿವನಗರದಂತಹ ಶ್ರೀಮಂತ ಪ್ರದೇಶದಲ್ಲಿರುವ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತ, ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರಿಗೂ ಬಸ್ ಪ್ರಯಾಣ ಉಚಿತ ನೀಡಬೇಕಾ? ಉಳ್ಳವರಿಗೂ ಉಚಿತ ಸೌಲಭ್ಯಗಳನ್ನು ನೀಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತೆ. ಅಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅವರ ಈ ಹೇಳಿಕೆಗೆ ಹಲವು ಶಾಸಕರು ಸಹಮತ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಮುಂದಿನ ಚುನಾವಣೆಗಳನ್ನು ಕೇವಲ ಗ್ಯಾರಂಟಿಗಳನ್ನು ನೆಚ್ಚಿಕೊಂಡು ಎದುರಿಸಲು ಸಾಧ್ಯವಿಲ್ಲ, ಬದಲಿಗೆ ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದೆಯೇ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Comments are closed.