Period Holiday : ಮಹಿಳೆಯರಿಗೆ ಮುಟ್ಟಿನ ರಜೆ ನಿರಾಕರಿಸಿದ್ರೆ ಬೀಳುತ್ತೆ ₹5 ಸಾವಿರ ದಂಡ – ಮಸೂದೆ ಮಂಡನೆಗೆ ಸರ್ಕಾರ ಸಿದ್ಧ

Share the Article

Period Holiday : ಮಹಿಳೆಯರಿಗೆ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವವರಿಗೆ ₹ 5 ಸಾವಿರದವರೆಗೆ ದಂಡ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ.

ಹೌದು, ಸಧ್ಯ ವಿಧಾನಸಭಾ ಅಧಿವೇಶನ ನಡೆಯುತ್ತಿದ್ದು, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ ₹ 5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ- 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ.

‘ರಾಜ್ಯ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸೇವೆಗಳಲ್ಲಿ ತೊಡಗಿರುವ ಮಹಿಳೆಯರು ಮುಟ್ಟಾದರೆ, ಆ ಅವಧಿಯಲ್ಲಿ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಈ ಮಸೂದೆಯನ್ನು ರೂಪಿಸಲಾಗಿದೆ. ಮಸೂದೆಯ ಅನ್ವಯ ಹುಡುಗಿಯರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಮುಟ್ಟಿನ ರಜೆ ಪಡೆಯಲು ಅರ್ಹರು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.

Comments are closed.