Anna Hazare: ಮತ್ತೆ ಉಪವಾಸ ಸತ್ಯಾಗ್ರಹ ಘೋಷಿಸಿದ ಅಣ್ಣಾ ಹಜಾರೆ- ಈ ಬಾರಿ ಇದೆ ನೋಡಿ ಪ್ರಬಲ ಕಾರಣ

Anna Hazare: ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಮರಸಾರಿ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿ ದೇಶಾದ್ಯಂತ ಸುದ್ದಿಯಾಗಿದ್ದ ಅಣ್ಣಾ ಹಜಾರೆಯವರು, ಇದೀಗ ಮತ್ತೆ ಉಪವಾಸ ಸತ್ಯಾಗ್ರಹವನ್ನು ಘೋಷಣೆ ಮಾಡಿದ್ದಾರೆ. ಇದಕ್ಕೆ ದಿನಾಂಕವನ್ನು ಕೂಡ ನಿಗದಿ ಮಾಡಿಕೊಂಡಿದ್ದಾರೆ. ಅಲ್ಲದೆ ಈ ಬಾರಿಯ ಸತ್ಯಾಗ್ರಹಕ್ಕೆ ಅತಿ ಪ್ರಬಲ ಕಾರಣವೂ ಇದೆ.

ಹೌದು, ಮಹಾರಾಷ್ಟ್ರದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಪ್ರಬಲ ಲೋಕಾಯುಕ್ತ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಅಣ್ಣಾ ಹಜಾರೆ ಅವರು ಬಹಳಷ್ಟು ದಿನಗಳಿಂದ ಸರ್ಕಾರಕ್ಕೆ ಒತ್ತಾಯ ಹಾಕುತ್ತಾ ಬಂದಿದ್ದಾರೆ. ಆದರೆ ಮಹಾರಾಷ್ಟ್ರ ಸರ್ಕಾರ ಇದಾವುದಕ್ಕೂ ಸೊಪ್ಪು ಹಾಕದೆ ತನ್ನ ಪಾಡಿಗೆ ಕರ್ತವ್ಯ ನಿರ್ವಹಿಸುತ್ತಿದೆ. ಇದೀಗ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದು, ಜನವರಿ 30, 2026 ರಿಂದ ತಮ್ಮ ಗ್ರಾಮವಾದ ರಾಲೇಗನ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರವು ಈ ಹಿಂದೆಯೇ 2022 ರ ಡಿಸೆಂಬರ್ 28 ರಂದು ವಿಧಾನಸಭೆಯಲ್ಲಿ ಮತ್ತು 2023 ರ ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ಲೋಕಾಯುಕ್ತ ಮಸೂದೆಯನ್ನು ಅಂಗೀಕರಿಸಿದ್ದರೂ, ಅದು ಇದುವರೆಗೂ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ. ಸರ್ಕಾರದ ಈ ವಿಳಂಬ ನೀತಿಯಿಂದಾಗಿ ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹದ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ.
ಇನ್ನು ಅಣ್ಣಾ ಹಜಾರೆ ಅವರು ಉಪವಾಸಕ್ಕೆ ಜನವರಿ 30 ರ ದಿನಾಂಕವನ್ನು ಆರಿಸಿಕೊಂಡಿರುವುದು ಮಹತ್ವದ್ದಾಗಿದೆ, ಏಕೆಂದರೆ ಇದು ಮಹಾತ್ಮ ಗಾಂಧಿಯವರ ಪುಣ್ಯತಿಥಿಯಾಗಿದೆ.
Comments are closed.