Congress: ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

Share the Article

Congress: ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ `ವೋಟ್ ಚೋರಿ’ (Vote Theft) ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಭಾನುವಾರ (ಡಿ.14) ದೆಹಲಿಯ (Delhi) ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ (Ramaleela Maidan) `ವೋಟ್ ಚೋರ್ ಗಡ್ಡಿ ಛೋಡ್ ಮಹಾ ರ‍್ಯಾಲಿ’ ಆಯೋಜಿಸಿದೆ.

ಈ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿಯಾಗಲಿದ್ದಾರೆ. ರ‍್ಯಾಲಿ ಮಧ್ಯಾಹ್ನ 1:30ಗಂಟೆಯಿಂದ ಆರಂಭವಾಗಿ, ಸಂಜೆಯವರೆಗೆ ನಡೆಯಲಿದೆ.

ಈ ಹಿನ್ನೆಲೆ ಕಾರ್ಯಕರ್ತರು ರಾಮಲೀಲಾ ಮೈದಾನಕ್ಕೆ ಆಗಮಿಸುತ್ತಿದ್ದಾರೆ. ಕರ್ನಾಟಕದಿಂದಲೂ ದೆಹಲಿಗೆ ಕಾರ್ಯಕರ್ತರ ದಂಡು ರ‍್ಯಾಲಿಯಲ್ಲಿ ಭಾಗಿಯಾಗುತ್ತಿದ್ದು, ವಿವಿಧ ರಾಜ್ಯಗಳಿಂದ ಸಾವಿರಾರು ಕಾರ್ಯಕರ್ತರು ಆಗಮಿಸಿದ್ದಾರೆ. ಕರ್ನಾಟಕದಿಂದ ಸುಮಾರು ನಾಲ್ಕೈದು ಸಾವಿರ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಸ್ಥಿತರಿಲಿದ್ದಾರೆ.

Comments are closed.