ಮಂಗಳೂರು: ಜ.1 ರಿಂದ ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ

Share the Article

ಮಂಗಳೂರು: ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಆದೇಶದ ಪ್ರಕಾರ ಜನವರಿ 1 ರಿಂದ ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡಲಾಗಿದೆ.

ಆಯೋಗದ ಆದೇಶದ ಅನುಸಾರ ಹೊಸದಾಗಿ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ ಆಗಿರುವುದರಿಂದ ಮೆಸ್ಕಾಂ ವ್ಯಾಪ್ತಿಯಲ್ಲಿ 2026 ರ ಜನವರಿ 1 ರಿಂದ ಹೊಸ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್‌ಗಳನ್ನು ಕಡ್ಡಾಯ ಮಾಡಲಾಗಿದೆ.

ಇದಕ್ಕೆ ಪ್ರತ್ಯೇಕವಾಗಿ ಹೆಚ್ಚು ಸ್ಥಳಾವಕಾಶ ಕಲ್ಪಿಸುವ ಅಗತ್ಯವಿಲ್ಲ. ಮತ್ತು ಈಗಾಗಲೇ ಸಂಪರ್ಕ ಪಡೆದುಕೊಂಡ ಗ್ರಾಹಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

Comments are closed.