Vittla: ವಿಟ್ಲ: ಬಸ್ ಮತ್ತು ಓಮ್ಮಿ ಕಾರು ನಡುವೆ ಭೀಕರ ರಸ್ತೆ ಅಪಘಾತ-ಓರ್ವ ಮೃತ್ಯು-ಇಬ್ಬರು ಗಂಭೀರ

Share the Article

Vittla: ವಿಟ್ಲ ಇಲ್ಲಿನ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಓಮ್ಮಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮೋನಪ್ಪ ಕುಲಾಲ್‌ ಮೈರ ಮೃತಪಟ್ಟವರಾಗಿದ್ದು, ಲಲಿತಾ ಮತ್ತು ರಮಣಿ ಗಂಭೀರವಾಗಿ ಗಾಯಗೊಂಡದ್ದಾರೆ.ಅಪಘಾತದ ರಭಸಕ್ಕೆ ಓಮ್ಮಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಳುಗಳನ್ನು ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆಯಾದರೂ ಈ ನಡುವೆ ಮೋನಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ಮಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮುಳಿಯ ಎಂಬಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

Comments are closed.