ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 60 ರ ವ್ಯಕ್ತಿಯನ್ನು ಸೆರೆಹಿಡಿದ ಸುರತ್ಕಲ್ ಪೊಲೀಸರು

ಸುರತ್ಕಲ್: ಟ್ಯೂಷನ್ ಮುಗಿಸಿ ವಾಪಾಸಾಗುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯೊಬ್ಬರನ್ನು ಸುರತ್ಕಲ್ ಪೊಲೀಸರು ಬಂಧನ ಮಾಡಿರುವ ಕುರಿತು ವರದಿಯಾಗಿದೆ.

ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ ಆರೋಪಿ.
ಬಾಲಕಿ ಹೊಸಬೆಟ್ಟುವಿನಲ್ಲಿ ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದು ಮುಕ್ಕದಲ್ಲಿ ಇಳಿದು, ನಂತರ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಳು. ಆಗ ಎದುರಿನಿಂದ ಬಂದ ಆರೋಪಿ ಸುಂದರ ಪೂಜಾರಿ, ಬಾಲಕಿಯ ಕೈ ಹಿಡಿದು ಎಳೆದು, ಎದೆಗೆ ಕೈ ಹಾಕಿ ಅಸಭ್ಯವಾಗಿ ವರ್ತನೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಿರುವುದಾಗಿ ವರದಿಯಾಗಿದೆ.
ಈ ಘಟನೆ ಅಕ್ಟೋಬರ್‌ನಲ್ಲಿ ನಡೆದಿದೆ ಎನ್ನಲಾಗಿದ್ದು, ಬಾಲಕಿ ತೀವ್ರ ಆಘಾತಕ್ಕೊಳಗಾಗಿ ಮಾನಸಿಕ ಖಿನ್ನತೆಗೆ ಜಾರಿದ್ದಳು. ಈ ಕುರಿತು ಚಿಕಿತ್ಸೆಗೆ ವೈದ್ಯರ ಬಳಿ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ವೈದ್ಯರ ಬಳಿ ತನ್ನ ಮೇಲೆ ನಡೆದ ದೌರ್ಜನ್ಯದ ವಿಷಯವನ್ನು ಹೇಳಿದ್ದಾಳೆ.
ವೈದ್ಯರ ಸಲಹೆಯಂತೆ ಮತ್ತು ಬಾಲಕಿ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಸುರತ್ಕಲ್ ಪೊಲೀಸರು ಆರೋಪಿ ಸುಂದರ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Comments are closed.